Telegram Join My Telegram WhatsApp Join My WhatsApp

Central Bank of India Recruitment 2026: 4500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

Central Bank of India Recruitment 2026: 4500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ, ಪದವೀಧರರಿಗೆ ಸುವರ್ಣಾವಕಾಶ

ನಮಸ್ಕಾರ ಸ್ನೇಹಿತರೇ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ಅವಕಾಶವನ್ನು ನೀಡಿದೆ. ದೇಶದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.

ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ನೇಮಕಾತಿ ವಿವರಗಳು

  • ಸಂಸ್ಥೆಯ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
  • ಹುದ್ದೆಯ ಹೆಸರು: ಅಪ್ರೆಂಟಿಸ್
  • ಒಟ್ಟು ಹುದ್ದೆಗಳು: 4500
  • ಕೆಲಸದ ಸ್ಥಳ: ಅಖಿಲ ಭಾರತ

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹15,000 ಸ್ಟೈಪೆಂಡ್ ನೀಡಲಾಗುತ್ತದೆ.

ವಯೋಮಿತಿ

  • ಕನಿಷ್ಠ ವಯಸ್ಸು: 20 ವರ್ಷ
  • ಗರಿಷ್ಠ ವಯಸ್ಸು: 28 ವರ್ಷ

ವಯೋಮಿತಿ ಸಡಿಲಿಕೆ

  • ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
  • ಪಿಡಬ್ಲ್ಯೂಬಿಡಿ (ಸಾಮಾನ್ಯ): 10 ವರ್ಷ
  • ಪಿಡಬ್ಲ್ಯೂಬಿಡಿ (ಒಬಿಸಿ): 13 ವರ್ಷ
  • ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ): 15 ವರ್ಷ

ಅರ್ಜಿ ಶುಲ್ಕ

  • ಸಾಮಾನ್ಯ / EWS / OBC (ಪುರುಷ): ₹800
  • ಸಾಮಾನ್ಯ / EWS / OBC (ಮಹಿಳೆ): ₹600
  • SC / ST / PWD ಅಭ್ಯರ್ಥಿಗಳು: ₹400

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆಯನ್ನು ಕೆಳಗಿನ ಹಂತಗಳ ಮೂಲಕ ಮಾಡಲಾಗುತ್ತದೆ:

  1. ಆನ್‌ಲೈನ್ ಪರೀಕ್ಷೆ
  2. ದಾಖಲೆಗಳ ಪರಿಶೀಲನೆ
  3. ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ

ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.

ನಂತರ ಅಗತ್ಯ ದಾಖಲೆಗಳಾದ ಫೋಟೋ, ಸಹಿ, ಗುರುತಿನ ಚೀಟಿ, ಅಂಕಪಟ್ಟಿ ಹಾಗೂ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಸಿದ್ಧವಾಗಿಟ್ಟುಕೊಂಡು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.

ಅರ್ಜಿ ಶುಲ್ಕ ಪಾವತಿಸಿದ ನಂತರ ಅರ್ಜಿಯನ್ನು ಸಲ್ಲಿಸಿ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಇಟ್ಟುಕೊಳ್ಳುವುದು ಉತ್ತಮ.

ಪ್ರಮುಖ ದಿನಾಂಕಗಳು

  • ಅರ್ಜಿ ಆರಂಭ ದಿನಾಂಕ: 12 ಜೂನ್ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜೂನ್ 2026

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಪದವೀಧರರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಕೈಚೆಲ್ಲಬೇಡಿ.

Register Link

ಅಧಿಕೃತ ಅಧಿಸೂಚನೆ ‌Click Here
ಬಿಎಫ್‌ಎಸ್‌ಐ ಎಸ್‌ಎಸ್‌ಸಿ  ಅರ್ಜಿ ಸಲ್ಲಿಸುವ ಲಿಂಕ್ Click Here
BEEP  ಅರ್ಜಿ ಸಲ್ಲಿಸುವ ಲಿಂಕ್ ‌Click Here
ಅಧಿಕೃತ ವೆಬ್ಸೈಟ್ ‌Click Here
WhatsApp Group Join Now
Telegram Group Join Now
Instagram Group Join Now

Leave a Comment